ಬೆಂಗಳೂರು: 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು 2021ರ ಫೆಬ್ರವರಿ 26,27 ಹಾಗೂ 28ರಂದು ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಹೇಳಿದ್ದಾರೆ.

ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾ ಸೋಂಕು ಇಳಿಮುಖವಾಗಿದ್ದು, ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ಅಕ್ಷರಜಾತ್ರೆಗೆ ಅನುವು ಮಾಡಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗುತ್ತದೆ ಎಂದು ಬಳಿಗಾರ್ ಹೇಳಿದ್ದಾರೆ.