ನವದೆಹಲಿ: ಇಡೀ ದೇಶಕ್ಕೆ ದೇಶವೇ ಕೋರಾನ ಸೊಂಕಿನಿಂದ ಬಳಲುತ್ತಿದ್ದು, ಈ ಅಂತಕದ ವಾತಾವರಣದ ನಡುವೆ ನೆಮ್ಮದಿಯ ಸುದ್ದಿಯೊಂದು ಬಂದಿದೆ.  ಹೌದು. ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (ಬಿಬಿಐಎಲ್) ನೊಂದಿಗೆ ಉತ್ಪಾದಿಸುತ್ತಿರುವ ಸ್ಥಳೀಯ ಕೋವಿಡ್ -19 ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಲು ದೇಶದ ಉನ್ನತ ಆರೋಗ್ಯ ಸಂಶೋಧನಾ ಸಂಸ್ಥೆಯಾದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಿರ್ಧರಿಸಿದೆ ಎನ್ನಲಾಗಿದೆ.

ಜುಲೈ 2 ರಂದು ಐಸಿಎಂಆರ್ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಅವರು ಬರೆದ ಪತ್ರದ ಪ್ರಕಾರ, ಆಗಸ್ಟ್ 15 ರೊಳಗೆ ಸಾರ್ವಜನಿಕ ಆರೋಗ್ಯ ಬಳಕೆಗಾಗಿ ಲಸಿಕೆ ಬಿಡುಗಡೆ ಮಾಡುವ ಉದ್ದೇಶವನ್ನು ನರೇಂದ್ರ ಮೋದಿ ಸರ್ಕಾರ ಹೊಂದಿದೆ ಎನ್ನಲಾಗಿದೆ. ಎಲ್ಲಾ ಕ್ಲಿನಿಕಲ್ ಪ್ರಯೋಗಗಳನ್ನು ಪೂರ್ಣಗೊಳಿಸಿದ ನಂತರ 2020 ಆಗಸ್ಟ್ 15 ರೊಳಗೆ ಸಾರ್ವಜನಿಕ ಆರೋಗ್ಯ ಬಳಕೆಗಾಗಿ ಲಸಿಕೆಯನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ ಎನ್ನಲಾಗಿದೆ.