ಶಾರ್ಜಾ: ಹೈದರಾಬಾದ್​ ವಿರುದ್ಧ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​ ತಂಡದ ನಾಯಕ ರೋಹಿತ್ ಶರ್ಮಾ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಅಂದ ಹಾಗೇ ಇಂದಿನ ಪಂದ್ಯದಲ್ಲಿ ಮುಂಬೈ, ಪಂಜಾಬ್ ವಿರುದ್ಧ ಆಡಿಸಿದ್ದ ತಂಡವನ್ನೇ ಕಣಕ್ಕಿಳಿಸುತ್ತಿದೆ. ಆದರೆ ದರಾಬಾದ್​ ತಂಡ ಎರಡು ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಗಾಯಾಳು ಭುವನೇಶ್ವರ್​ ಬದಲು ಸಿದ್ದಾರ್ಥ್​ ಕೌಲ್​ ಹಾಗೂ ಖಲೀಲ್ ಅಹ್ಮದ್​ ಬದಲು ಸಂದೀಪ್ ಶರ್ಮಾರನ್ನು ಆಯ್ಕೆಮಾಡಿಕೊಂಡಿದೆ.
ಉಭಯ ತಂಡಗಳ ಆಟಗಾರರ ವಿವರ :
ಮುಂಬೈ: ರೋಹಿತ್ ಶರ್ಮ (ನಾಯಕ), ಕ್ವಿಂಟನ್ ಡಿಕಾಕ್ (ವಿಕೀ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೈರಾನ್ ಪೊಲ್ಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್‌ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬುಮ್ರಾ.
ಸನ್​ರೈಸರ್ಸ್​ ಹೈದರಾಬಾದ್​: ಡೇವಿಡ್ ವಾರ್ನರ್ (ನಾಯಕ), ಜಾನಿ ಬೇರ್‌ಸ್ಟೋ (ವಿಕೀ), ಮನೀಷ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಪ್ರಿಯಂ ಗಾರ್ಗ್, ಅಭಿಷೇಕ್ ಶರ್ಮ, ರಶೀದ್ ಖಾನ್, ಸಿದ್ದಾರ್ಥ್ ಕೌಲ್,ಸಂದೀಪ್ ಶರ್ಮ, ಟಿ.ನಟರಾಜನ್.