ನವದೆಹಲಿ : ಪ್ರಸಕ್ತ ಸಾಲಿನ ವೃತ್ತಪರ ಕೋರ್ಸ್ ಗಳಿಗೆ ನಡೆಯಲಿರುವ ನೀಟ್ ( ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಹಾಗೂ ಜೆಇಇ (ಜಂಟಿ ಪ್ರವೇಶ ಪರೀಕ್ಷೆ)ಗೆ ಕೊನೆಗೂ ದಿನಾಂಕ ಘೋಷಣೆಯಾಗಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದ್ದು, ಸೆಪ್ಟೆಂಬರ್ 1 ರಿಂದ 6 ರವರೆಗೆ ಜೆಇಇ ಪರೀಕ್ಷೆ ನಡೆಯಲಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿ ನೀಡಿದೆ.