ನವದೆಹಲಿ; JEE , NEET ಪರೀಕ್ಷೆ ಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನ್ಯಾಯಾಲಯಗಳು ಮತ್ತೆ ತೆರೆಯಬೇಕೆಂದು ನೀವು ಒತ್ತಾಯಿಸುತ್ತಿಲ್ಲವೇ? ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆಗಳನ್ನು ನಡೆಸಲು ಏಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿರುವ ನ್ಯಾಯಮೂರ್ತಿ ಅರುಣ್ ಮಿಶ್ರಾ, ಪರೀಕ್ಷೆಗಳು ನಡೆಯದಿದ್ದರೆ, ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.