ನವದೆಹಲಿ:  ಪಿಎಂ ನರೇಂದ್ರ ಮೋದಿ ಅವರು ಲಡಾಖ್ ತಲುಪಿದ್ದು, ಪ್ರಸ್ತುತ ಭಾರತೀಯ ಸೇನೆ, ಐಟಿಬಿಪಿ ಮತ್ತು ವಾಯುಪಡೆಯ ಸಿಬ್ಬಂದಿಯೊಂದಿಗೆ ಮಾತನಾಡುತ್ತಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಪ್ರಧಾನಿ ಮೋದಿ ಗಾಲ್ವಾನ್ ವ್ಯಾಲಿ ಘರ್ಷಣೆಯಲ್ಲಿ ಗಾಯಗೊಂಡ ಸೈನಿಕರನ್ನು ಪಿಎಂ ಮೋದಿ ಭೇಟಿ ಮಾಡಿ ಸ್ವಾಂತನವನ್ನು ಕೂಡ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಭಾರತ ಹಾಗೂ ಚೀನಾ ನಡುವಿನ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ಮೋದಿಯವರು ದೇಶದ ಗಡಿ ಭಾಗಕ್ಕೆ ಭೇಟಿ ನೀಡುತ್ತಿರುವುದು ಎಲ್ಲರ ಗಮನ ಸೆಳೆದಿದ್ದು, ಇದೊಂದು ಐತಿಹಾಸಿಕ ಭೇಟಿ ಎನ್ನಲಾಗುತ್ತಿದೆ. 

ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಉತ್ತರ ಸೇನಾ ಕಮಾಂಡರ್ ಅಧಿಕಾರಿಗಳಾದ ಲೆಫ್ಟಿನೆಂಟ್ ಜನರಲ್ ವೈ.ಕೆ.ಜೋಶಿ ಮತ್ತು ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಮತ್ತು ಲಡಾಖ್‌ನ 14 ಕಾರ್ಪ್ಸ್ ಅಧಿಕಾರಿಗಳು ಪ್ರಧಾನಿ ಮೋದಿಯವರೊಂದಿಗೆ ಇದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ ಪ್ರಧಾನಿ ಮೋದಿ 14 ಕಾರ್ಪ್ಸ್ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದು, ಇದೇ ವೇಳೆ ಅವರು ಗಲ್ವಾನ್ ವ್ಯಾಲಿ ಘರ್ಷಣೆಯಲ್ಲಿ ಗಾಯಗೊಂಡ ಸೈನಿಕರನ್ನು ಭೇಟಿಯಾಗಬಹುದು ಎನ್ನಲಾಗಿದೆ.