ಬೆಂಗಳೂರು: 2020-21ನೇ ಸಾಲಿನ ಬಜೆಟ್ ಘೋಷಣೆಯಂತೆ ಸ್ವಾತಂತ್ರ್ಯಸಂಗ್ರಾಮದ ಭಾಗವಾಗಿ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಎನ್ನುವವರ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 1 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಸಿ ಕುಮಾರ ಅವರು ನಡವಳಿಕೆ ಹೊರಡಿಸಿದ್ದಾರೆ.