ಬೆಂಗಳೂರು: ಆ.8ರಂದು ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಸಚಿವ ಸುರೇಶ್​ ಕುಮಾರ್​, ಫಲಿತಾಂಶ ಪ್ರಕಟ ಯಾವಾಗ ಎಂಬುದು ಇನ್ನೂ ನಿಶ್ಚಯವಾಗಿಲ್ಲ ಎಂದಿದ್ದರು. ಇದೀಗ ಎಲ್ಲ ಗೊಂದಲಗಳಿಗೂ ತೆರೆ ಬಿದ್ದಿದೆ.

ಆ.10ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.