ಜಮ್ಮು:  ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸೋಮವಾರ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ ಎಂದು ಅಧಿಕೃತ ಮೂಲಗಳು ಇಲ್ಲಿ ತಿಳಿಸಿವೆ.

ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಬಾಬಖೋರಿಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸಂಜೆ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ.

ಗುಂಡಿನ ದಾಳಿಯಿಂದ ಭಾರತೀಯ ಸೇನೆಯ ಓರ್ವ ಜೆಸಿಓ ತೀವ್ರವಾಗಿ ಗಾಯಗೊಂಡಿದ್ದು, ನಂತರ ಕೊನೆಯುಸಿರೆಳೆದಿದ್ದಾರೆ. ಗುಂಡಿನ ದಾಳಿಗೆ ಭಾರತೀಯ ಸೇನೆ ಪ್ರತಿದಾಳಿ ನಡೆಸಿದೆ ಎಂದು ಸೇನಾಧಿಕಾರಿ ತಿಳಿಸಿದ್ದಾರೆ.