ತುಮಕೂರು : ರಾಜ್ಯದಲ್ಲಿ ಎರಡು ದಿನ ಪ್ರವಾಸಮಾಡುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಹೆಲಿಕಾಪ್ಟರ್ ಮೂಲಕ ತುಮಕೂರು ವಿಶ್ವವಿದ್ಯಾಲಯದ ಕ್ರೀಡಾಂಗಣಕ್ಕೆ ಆಗಮಿಸಿದ ಅಮಿತ್ ಶಾ, ಕಾರಿನಲ್ಲಿ ಸಿದ್ದಗಂಗಾ ಮಠದ ತೆರಳಿದರು. ಇವರ ಜೊತೆಗೆ ಕೇಂದ್ರ ಸಚಿವ ಅನಂತ್ ಕುಮಾರ್, ರಾಜ್ಯ ಉಸ್ತುವರಿ ಮುರಳೀಧರ್ ರಾವ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂಸದ ಪ್ರಹ್ಲಾದ್ ಜೋಷಿ ಸೇರಿದಂತೆ ಮುಖಂಡರಗಳು  ಶ್ರೀಗಳ ಆಶೀರ್ವಾದ ಪಡೆದರು.