ಬೆಂಗಳೂರು: ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಾವು ಬಿಜೆಪಿ ತೊರೆದು ಮತ್ತೊಂದು ಪಕ್ಷ ಸೇರುವುದಾಗಿ ಕೇಳಿಬರುತ್ತಿರುವುದು ವದಂತಿ ಸುಳ್ಳಯಎಂದು ಹೇಳಿದ್ದಾರೆ. ಪಕ್ಷ ನನ್ನನ್ನು ಗುರುತಿಸಿ ಟಿಕೆಟ್ ನೀಡುವ ಮೂಲಕ ಗೆಲುವಿಗೆ ಸಹಕಾರ ನೀಡಿದೆ ಹಾಗೂ ಹಿರಿಯೂರು ಕ್ಷೇತ್ರದ ಮತದಾರರು ಮತನೀಡಿದ್ದಾರೆ ನಿರಾಸೆ ಮಾಡಲಾರೆ ಎಂದು ಹೇಳಿದ್ದಾರೆ.