ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಮತ್ತೊಂದು ಹೈವೋಲ್ಟೇಜ್ ಕದನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಬುಧಾಬಿಯ ಶೇಖ್ ಜಾಯದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಪಂದ್ಯದಲ್ಲಿ 15ನೇ ಸ್ಥಾನಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಐಪಿಎಲ್ 2020ರಲ್ಲಿ ಆರ್ ಸಿಬಿ ಮತ್ತು ಆರ್ ಆರ್ ಎರಡೂ ತಂಡದಲ್ಲಿ ಉತ್ತಮವಾದ ಆಟಗಾರನ್ನು ಹೊಂದಿದ್ದು. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಗಳಿಸುವ ಮೂಲಕ ಬೆಂಗಳೂರು ಮೂಲದ ಫ್ರಾಂಚೈಸಿ ತನ್ನ ಋತುವನ್ನು ಆರಂಭಮಾಡಿತ್ತು. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೋತರೂ ಸೂಪರ್ ಓವರ್ ನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ ಸಿಬಿ ತಂಡ ಭರ್ಜರಿ ಪ್ರದರ್ಶನ ತೋರಿ ತನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.
No comments!
There are no comments yet, but you can be first to comment this article.