ಚಿತ್ರದುರ್ಗ : ನಗರದ ಶ್ರೀ ಮುರುಘಾಮಠಕ್ಕೆ ಯುಗಾದಿ ಚಂದ್ರದರ್ಶನ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಮತ್ತು ಹರಗುರು ಚರಮೂರ್ತಿಗಳು ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದರು. ಶ್ರೀ ಜಯಬಸವ ಸ್ವಾಮಿಗಳು, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು, ಶ್ರೀ ಶಾಂತವೀರ ಸ್ವಾಮಿಗಳು, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು, ಶ್ರೀ ಶಿವಬಸವ ಸ್ವಾಮಿಗಳು, ಶ್ರೀ ಬಸವ ಶಾಂತಲಿಂಗ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಇದ್ದರು.

ಈ ಸಂದರ್ಭದಲ್ಲಿ ಪೂಜ್ಯಶ್ರೀಗಳು, ಕಡ್ಡಾಯ ಮತದಾನ ಮಾಡುವಂತೆ ಕರಪತ್ರಗಳನ್ನು ವಿತರಿಸಿ ಮತದಾನ ಜಾಗೃತಿ ಮೂಡಿಸಿದರು. ನಂತರ ಆಗಮಿಸಿದ ಭಕ್ತಾದಿಗಳಿಗೆ ಪಾನಕ ಕೋಸಂಬರಿ ವಿತರಿಸಲಾಯಿತು.