ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ ಗ್ರೂಪ್‌ನ ಸ್ಥಾಪಕ ಮತ್ತು ಅಧ್ಯಕ್ಷ ಗೌತಮ್ ಅದಾನಿ ಈಗ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಅಸ್ಸಾಂ: ಪೋಷಕರ ಭೇಟಿಗೆ ಸರ್ಕಾರಿ ನೌಕರರಿಗೆ ಹೆಚ್ಚುವರಿ ರಜೆ

ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಲ್ಲಿ ಒಂದೂವರೆ ಶೇಕಡದಷ್ಟು ಕುಸಿತ ಕಂಡ ಹಿನ್ನೆಲೆ ಕಂಪನಿಯು ಭಾರೀ ಹಿನ್ನೆಡೆ ಅನುಭವಿಸಿದೆ ಎಂಬ ಮಾಹಿತಿ ದೊರೆತಿದೆ. ಮುಕೇಶ್ ಅಂಬಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್​ನಲ್ಲಿ ಶೇಕಡಾ 50ರಷ್ಟಿದ್ದು, ಉದ್ಯಮದಲ್ಲಿನ ಅವರ ಪಾಲು 11 ಸಾವಿರ ಕೋಟಿಗೆ ಇಳಿಕೆಯಾಗಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಇನ್‌ಫ್ರಾಸ್ಟ್ರಕ್ಚರ್‌ ಷೇರು ಸಹ ಶೇಕಡಾ 1.57ರಷ್ಟುನಷ್ಟಕ್ಕೆ ಒಳಗಾಗಿದೆ. ಇದರಿಂದ ಮುಕೇಶ್ ಅಂಬಾನಿ ಒಟ್ಟು ಸಂಪತ್ತಿನಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಷೇರು ಮಾರುಕಟ್ಟೆಯಲ್ಲಾದ ಕುಸಿತದ ಪರಿಣಾಮವಾಗಿ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ನಿವ್ವಳ ಮೌಲ್ಯದಲ್ಲಿ ಶೇಕಡ 3.6 ಬಿಲಿಯನ್ ಡಾಲರ್‌ ವ್ಯತ್ಯಾಸವು ಕಂಡು ಬಂದಿದೆ.