ಚಿತ್ರದುರ್ಗ: ,ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ಟೋಬರ್ 13 ರಂದು ಬಿದ್ದ ಮಳೆಯ ವಿವರದನ್ವಯ ಹಿರಿಯೂರು ತಾಲ್ಲೂಕಿನ ಈಶ್ವರಗೆರೆಯಲ್ಲಿ 102 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 70.8,  ಬಬ್ಬೂರು 47, ಇಕ್ಕನೂರು 87.6,  ಸುಗೂರಿನಲ್ಲಿ 6.3 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ 16.4, ನಾಯಕನಹಟ್ಟಿ 4.2, ತಳುಕು 3.4 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು 10.2,   ಭರಮಸಾಗರ 12.3  ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 14.4,  ರಾಮಗಿರಿ 6.2,  ಚಿಕ್ಕಜಾಜೂರು 8.6, ಬಿ.ದುರ್ಗ 22, ಹೆಚ್.ಡಿ.ಪುರ 37.4, ತಾಳ್ಯ 6.4 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 16.8, ಬಾಗೂರು 2, ಮತ್ತೋಡು 4.2,  ಮಾಡದಕೆರೆ 13.2 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 27.6, ರಾಂಪುರ 6,  ರಾಯಾಪುರ 31  ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.