ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ - BC Suddi
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ

ಬೆಂಗಳೂರು : ಇಂದಿನಿಂದ ಮುಂದಿನ ಐದು ದಿನ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದುಉ, ಮುಂದಿನ 5 ದಿನ ಮಳೆ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಏಪ್ರೀಲ್ 29, 30 ರಂದು ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.