ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಮೇ 5 ರಿಂದ ಮೂರುದಿನ ಮಳೆ.! - BC Suddi
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಮೇ 5 ರಿಂದ ಮೂರುದಿನ ಮಳೆ.!

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಮೇ 5 ರಿಂದ ಮೂರುದಿನ ಮಳೆ.!

 

ಬೆಂಗಳೂರು: ರಾಜ್ಯದಲ್ಲಿ ಮೇ 5 ರಿಂದ 3 ದಿನ ಮಳೆಯಾಗಲಿದೆ ಏಕೆಂದರೆ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೇ 5 ರಿಂದ 7 ರವರೆಗೆ ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಮೇ 6, 7 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 72 ಗಂಟೆಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.