ಆಕ್ಸಿಜನ್ ಕೊರತೆ ಸಾವಿನ ಪ್ರಮಾಣ ಹೆಚ್ಚಳ.! ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ.! - BC Suddi
ಆಕ್ಸಿಜನ್ ಕೊರತೆ ಸಾವಿನ ಪ್ರಮಾಣ ಹೆಚ್ಚಳ.! ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ.!

ಆಕ್ಸಿಜನ್ ಕೊರತೆ ಸಾವಿನ ಪ್ರಮಾಣ ಹೆಚ್ಚಳ.! ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ.!

 

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮಾತನಾಡಿ ಆಕ್ಸಿಜನ್ ಕೊರತೆಯಿಂದಾಗಿ ನಿನ್ನೆ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಜನ ಕೊರೋನಾ ರೋಗಿಗಳು ಮೃತಪಟ್ಟಿದ್ದರು. ಇಂದು ಕಲಬುರ್ಗಿಯ ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ 4 ಜನ ಮೃತಪಟ್ಟಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು. ಅಲ್ಲದೆ, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆಕ್ಸಿಜನ್ ಕೊರತೆ ಮತ್ತು ರೆಮ್ಡಿಸಿವಿರ್ ಅಕ್ರಮ ಮಾರಾಟ ಬಗ್ಗೆ ನನಗೆ ಮಾಹಿತಿ ಇದೆ. ಈ ಬಗ್ಗೆ ವಿಸ್ಕೃತ ತನಿಖೆ ನಡೆಸಲಾಗುವುದು. ಈಗಾಗಲೇ ಹಲವೆಡೆ ವೈದ್ಯರು ರೆಮ್ಡಿಸಿವಿರ್ ಔಷಧವನ್ನು ಅಧಿಕ ಬೆಲೆಗೆ ಮಾರಾಟ ಮಾಡಿ ಪೊಲೀಸರ ಅತಿಥಿಯಾದ ಬಗ್ಗೆ ಸಾಕಷ್ಟು ವರದಿಗಳಾಗಿವೆ. ಹೀಗಾಗಿ ಈ ವಿಚಾರವನ್ನು ಸರ್ಕಾರ ಸಹ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.