ಆಕ್ಸಿಜನ್ ಸಿಗದೇ ಇಬ್ಬರು ರೋಗಿಗಳ ಸಾವು.! - BC Suddi
ಆಕ್ಸಿಜನ್ ಸಿಗದೇ ಇಬ್ಬರು ರೋಗಿಗಳ ಸಾವು.!

ಆಕ್ಸಿಜನ್ ಸಿಗದೇ ಇಬ್ಬರು ರೋಗಿಗಳ ಸಾವು.!

 

ಬೆಂಗಳೂರು : ಬೆಂಗಳೂರಿನಲ್ಲಿ ಆಕ್ಸಿಜನ್ ಸಿಗದೇ ಇಬ್ಬರು ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದ ಕಾರಣ ಇಬ್ಬರು ರೋಗಿಗಳು ಸಾವನ್ನಪ್ಪಿದ್ದಾರೆ. ತಡರಾತ್ರಿ 12,30 ಕ್ಕೆ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿದ್ದು,ಇಬ್ಬರು ಮೃತಪಟ್ಟಿದ್ದಾರೆ.

ಆಸ್ಪತ್ರೆಯಲ್ಲಿ 15 ಮಂದಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಇಬ್ಬರು ಆಕ್ಸಿಜನ್ ಸಿಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

(ಸಾಂದರ್ಭಿಕ ಚಿತ್ರ)