ದೇವನಹಳ್ಳಿ: ದಸರಾ ಆಯುಧ ಪೂಜೆ ಹಿನ್ನೆಲೆಯಲ್ಲಿ ಮಗನ ಕಂಪನಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಆಟೋಮೊಬೈಲ್ ಫ್ಯಾಕ್ಟರಿಗೆ ಸಿಎಂ ಭೇಟಿ ನೀಡಿದ್ದಾರೆ.

ಮಹಾಮಾರಿ ಕೊರೊನಾ ನಿಯಂತ್ರಣದಲ್ಲಿದ್ದು ಇಂದು ರಾಜ್ಯಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆ ಮಾಡಲಾಗದ ಆಯುಧ ಪೂಜೆಯನ್ನು ಇಂದು ನಾಡಿನಾದ್ಯಂತ ಸಡಗರದಿಂದ ಆಚರಿಸುತ್ತಿದ್ದಾರೆ.

ತಮಿಳಿನ ಹಿರಿಯ ನಟ ಶ್ರೀಕಾಂತ್ ನಿಧನ

ಈ ನಡುವೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮಗನ ಮ್ಯಾಗ್ನಾಟಿಕ್ ಹಾಗೂ ರೇಣುಕಾ ಇಂಡಸ್ಟ್ರೀಸ್ ಆಟೋಮೊಬೈಲ್ ಫ್ಯಾಕ್ಟರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಕಾರ್ಮಿಕರಿಗೆ ಬೋನಸ್ ನೀಡಿದ್ದಾರೆ. ಅರ್ಧಗಂಟೆಗಳ‌ ಕಾಲ ಪ್ಯಾಕ್ಟರಿಯಲ್ಲಿ ದಸರಾ ಪೂಜೆ ಸಲ್ಲಿಸಿ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ.