ಇಂದಿನಿಂದ ಈ ಜಿಲ್ಲೆಗಳಲ್ಲಿ ಮೂರುದಿನ ಮಳೆ - BC Suddi
ಇಂದಿನಿಂದ ಈ ಜಿಲ್ಲೆಗಳಲ್ಲಿ ಮೂರುದಿನ ಮಳೆ

ಇಂದಿನಿಂದ ಈ ಜಿಲ್ಲೆಗಳಲ್ಲಿ ಮೂರುದಿನ ಮಳೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಏಪ್ರಿಲ್ 22 ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮೈಸೂರು ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಇಂದು ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.