ಇಂದಿನಿಂದ ಮೂರುದಿನಗಳವರೆಗೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ.! - BC Suddi
ಇಂದಿನಿಂದ ಮೂರುದಿನಗಳವರೆಗೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ.!

ಇಂದಿನಿಂದ ಮೂರುದಿನಗಳವರೆಗೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ.!

 

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ‘ಮಳೆ’ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 13 ರಿಂದ 15 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ‘ಮಳೆ’ ಯಾಗುವ ಸಾಧ್ಯತೆ ಇದೆ ಏಪ್ರಿಲ್ 14 ರಂದು ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.