ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ.! - BC Suddi
ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ.!

ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ.!

ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 22 ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಏಪ್ರಿಲ್ 20 ರವರೆಗೆ ಸಾಧಾರಣೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೊಡಗು ಜಿಲ್ಲೆಯಲ್ಲಿ ನಿನ್ನೆ ಸರಾಸರಿ 40.25 ಮಿ.ಮೀ ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಸರಾಸರಿ 16.07 ಮಿ.ಮೀ, ವಿರಾಜಪೇಟೆಯಲ್ಲಿ ಸರಾಸರಿ 12.75 ಮಿ.ಮೀ ಮಳೆಯಾಗಿದ್ದು, ಇಂದಿನಿಂದ 5 ದಿನ ಮತ್ತೆ ಸಾಧಾರಣೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.