ಇಂದು ಮತ್ತು ನಾಳೆ ಮಳೆ ಹಲವು ಜಿಲ್ಲೆಗಳಲ್ಲಿ ಮುಂದುವರಿಕೆ.! - BC Suddi
ಇಂದು ಮತ್ತು ನಾಳೆ ಮಳೆ ಹಲವು ಜಿಲ್ಲೆಗಳಲ್ಲಿ ಮುಂದುವರಿಕೆ.!

ಇಂದು ಮತ್ತು ನಾಳೆ ಮಳೆ ಹಲವು ಜಿಲ್ಲೆಗಳಲ್ಲಿ ಮುಂದುವರಿಕೆ.!

ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮೈಸೂರು , ಮಂಡ್ಯ, ದಾವಣಗೆರೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 2 ದಿನ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ..