ಇಂದು ರಾಜ್ಯದಲ್ಲಿ ಭಾರೀ ಮಳೆ.! 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.! - BC Suddi
ಇಂದು ರಾಜ್ಯದಲ್ಲಿ ಭಾರೀ ಮಳೆ.! 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!

ಇಂದು ರಾಜ್ಯದಲ್ಲಿ ಭಾರೀ ಮಳೆ.! 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.