ಈ 10 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸ್ಥಗಿತ.! - BC Suddi
ಈ 10 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸ್ಥಗಿತ.!

ಈ 10 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸ್ಥಗಿತ.!

ಬೆಂಗಳೂರು : ಈ ಕೆಳಕಂಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ಕಂಡು ಬರುತ್ತಿದ್ದು, ಸಾರ್ವಜನಿಕರು ಒಂದೆಡೆ ಗುಂಪು ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗ ಇನ್ನೂ ಕೂಡ ಹೆಚ್ಚಾಗಿ ಹರಡುವ ಸಾಧ್ಯತೆಯಿದೆ. ಆದ್ದರಿಂದ ಮುಂದಿನ ಆದೇಶದವರೆಗೂ ಈ 10 ಜಿಲ್ಲೆಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ , ಹಳ್ಳಿಗಳ ಭೇಟಿ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಜಿಲ್ಲೆಗಳಾದ ಬಳ್ಳಾರಿ,  ಬೆಂಗಳೂರು ( ನಗರ), ಬೆಂಗಳೂರು ( ಗ್ರಾಮಾಂತರ), ಬೀದರ್, ದಕ್ಷಿಣ ಕನ್ನಡ, ಹಾಸನ, ಕಲಬುರಗಿ, ಮಂಡ್ಯ, ಮೈಸೂರು, ತುಮಕೂರು ಈ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಇಲ್ಲ.

error: Content is protected !!