ಹೊನ್ನಾಳಿ: ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 47 ಮಕ್ಕಳು ಅಸ್ವಸ್ಥರಾಗಿದ್ದಾರೆ.

ಮಕ್ಕಳಿಗೆ ಉಪಹಾರಕ್ಕೆ ಉಪ್ಪಿಟ್ಟು ನೀಡಲಾಗಿತ್ತು. ಇದನ್ನು ತಿಂದ ಮಕ್ಕಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದ್ದು, 38 ಮಕ್ಕಳು ಅಸ್ವಸ್ಥರಾಗಿದ್ದಾರೆ. ಬಳಿಕ 5 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಹಾರದ ಮಾದರಿಯನ್ನು ಪರಿಶೀಲನೆಗಾಘಿ ದಾವಣೆಗೆರೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಎಂ ಪಿ ರೇಣುಕಾಚಾರ್ಯ, ಮಕ್ಕಳು ಹಾಗೂ ಪೋಷಕರಿಗೆ ಧೈರ್ಯ ಹೇಳಿದ್ದಾರೆ.

“ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗುಣಮುಖರಾಗುತ್ತಿದ್ದಾರೆ” ಎಂದು ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ ಚಂದ್ರಪ್ಪ ಮಾಹಿತಿ ನೀಡಿದ್ದಾರೆ.