ಪೊಲೀಸರನ್ನೇ ಕಳ್ಳರೆಂದು ಭಾವಿಸಿ ಗ್ರಾಮಸ್ಥರು ಥಳಿಸಿರುವ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಸಾಮಾನ್ಯ ಉಡುಪಿನಲ್ಲಿದ್ದ ಪೊಲೀಸ್ ತಂಡವನ್ನು ಕಳ್ಳರೆಂದು ಭಾವಿಸಿ ಗ್ರಾಮಸ್ಥರ ಗುಂಪು ಹಲ್ಲೆ ನಡೆಸಿದೆ. ಆದರೆ ವಾಸ್ತವ ಹೇಳಬೇಕೆಂದರೆ ಗಾಂಜಾ ಕಳ್ಳಸಾಗಣಿಕೆ ಮೇಲೆ ದಾಳಿ ನಡೆಸಲು ಅಧಿಕಾರಿಗಳು ಅಲ್ಲಿಗೆ ಹೋಗಿದ್ದರು. ಆದರೆ ಗ್ರಾಮಸ್ಥರು ಕಳ್ಳರು ಎಂದು ತಪ್ಪಾಗಿ ತಿಳಿದು ಚೆನ್ನಾಗಿ ಹೊಡೆದಿದ್ದಾರೆ. ಈ ವೇಳೆ ಹಲವಾರು ಪೊಲೀಸರಿಗೆ ಗಾಯಗೊಂಡಿದ್ದು, ಕೆಲವರು ಸ್ಥಳದಿಂದ ಪರಾರಿಯಾಗಿದ್ದಾರೆ ಮತ್ತು ಓರ್ವ ಪೊಲೀಸರನ್ನು ಗ್ರಾಮಸ್ಥರು ಸೆರೆಹಿಡಿದಿದ್ದಾರೆ.