ಗುಜರಾತ್‌ನ ಕಾಂಗ್ರೆಸ್ ಯುವ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಹಾರ್ದಿಕ್ ಪಟೇಲ್ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಸಹೋದ್ಯೋಗಿಗಳು, ಗುಜರಾತ್ ಜನ ಸ್ವಾಗತಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ಹೆಜ್ಜೆಯಿಂದ ಭವಿಷ್ಯದಲ್ಲಿ ನಾನು ಗುಜರಾತ್‌ಗೆ ನಿಜವಾಗಿಯೂ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯವಾಗಲಿದೆ ಎಂದು ನಂಬುತ್ತೇನೆ ಎಂದು ಟ್ವೀಟ್‌ ಮಾಡುವ ಮೂಲಕವಾಗಿ ಸ್ಪಷ್ಟಪಡಿಸಿದ್ದಾರೆ.