ಗುಜರಾತ್:  ಇಂದು (ಬುಧವಾರ) ಮಧ್ಯಾಹ್ನ ಗುಜರಾತ್‌ನ ಮೊರ್ಬಿಯಲ್ಲಿ ಕಾರ್ಖಾನೆಯ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲ್ವಾಡ್ ಜಿಐಡಿಸಿ (ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮ) ದಲ್ಲಿರುವ ಸಾಗರ್ ಸಾಲ್ಟ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ.

ಉಪ್ಪು ಕಾರ್ಖಾನೆಯಲ್ಲಿ ಗೋಡೆ ಕುಸಿದು 12 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸಚಿವ ಬ್ರಿಜೇಶ್ ಮೆರ್ಜಾ ಖಚಿತಪಡಿಸಿದ್ದಾರೆ. ಮೃತರ ಕುಟುಂಬದವರ ಜೊತೆ ಸರ್ಕಾರ ನಿಂತಿದೆ ಎಂದು ಅವರು ಹೇಳಿದ್ದಾರೆ. ಈ ನಡುವೆ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.