ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಸೋಮವಾರ ಸಂಜೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ವರದಿಯಾಗಿದೆ.

ಹತ್ಯೆಯಾದ ಉಗ್ರರನ್ನು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರಾದ ಶಹೀದ್ ರಾಥರ್‌ ಮತ್ತು ಶೋಪಿಯಾನ್‌ನ ಉಮರ್ ಯೂಸುಫ್‌ ಎಂದು ಗುರುತಿಸಲಾಗಿದೆ. ಭಯೋತ್ಪಾದಕರಿಂದ ಎರಡು ಎಕೆ 47 ಬಂದೂಕು ಸೇರಿದಂತೆ ದೋಷಾರೋಪಣೆ ಮಾಡುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.