ವಿಜಯನಗರ: ಸಾಹಿತಿ ಕುಂ.ವೀರಭದ್ರಪ್ಪ. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸೇರಿ 61 ಮಂದಿಗೆ ಜೀವ ಬೆದರಿಕೆ ಪತ್ರ ಬಂದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಸಾಹಿತಿ ಕುಂ.ವೀರಭದ್ರಪ್ಪ ನವರು ಹಾಗೂ ನಟ ಪ್ರಕಾಶ್ ರೈ ಸೇರಿದಂತೆ ಒಟ್ಟು 61 ಜನರಿಗೆ ಬೆದರಿಕೆ ಪತ್ರ ಬಂದಿದೆ.

ಚಿತ್ರದುರ್ಗದಿಂದ ಈ ಪತ್ರ ಬಂದಿದೆ ಎನ್ನಲಾಗಿದೆ. ಪತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿಜಗುಣಾನಂದ ಸ್ವಾಮಿಜಿ, ಬಿ.ಕೆ.ಹರಿಪ್ರಸಾದ್, ದಿನೇಶ್ ಗುಂಡೂರಾವ್ ಹಾಗೂ ಪ್ರಕಾಶ್ ರೈ, ದಿನೇಶ್ ಅಮಿನ್ ಮಟ್ಟು, ಸೇರಿದಂತೆ 61 ಮಂದಿ ಹೆಸರು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಹಿಂದೂ ರಾಷ್ಟ್ರಕ್ಕಾಗಿ, ಹಿಂದೂ ಯುವಕರು ಸಾವಿಗೀಡಾದಾಗ ನೀವುಗಳು ಮೌನವಹಿಸುತ್ತೀರಿ, ಮತಬ್ಯಾಂಕ್​ಗಾಗಿ ನೀವು ಏನು ಬೇಕಾದರು ಮಾಡುತ್ತೀರಿ. ನೀವುಗಳು ಪೇಪರ್ ಹೀರೋ ಆಗಲು ಹೊರಟಿದ್ದೀರಿ ಎಂದು ಹೇಳಿ ಬರೆಯಲಾಗಿದೆ.