ಕೆಎಸ್‌ಆರ್‌ಪಿ ನೇಮಕಾತಿ ಪರೀಕ್ಷೆ - ಮೂವರು ನಕಲಿ ಅಭ್ಯರ್ಥಿಗಳ ಬಂಧನ - BC Suddi
ಕೆಎಸ್‌ಆರ್‌ಪಿ ನೇಮಕಾತಿ ಪರೀಕ್ಷೆ – ಮೂವರು ನಕಲಿ ಅಭ್ಯರ್ಥಿಗಳ ಬಂಧನ

ಕೆಎಸ್‌ಆರ್‌ಪಿ ನೇಮಕಾತಿ ಪರೀಕ್ಷೆ – ಮೂವರು ನಕಲಿ ಅಭ್ಯರ್ಥಿಗಳ ಬಂಧನ

(ಸಾಂದರ್ಭಿಕ ಚಿತ್ರ)

ಬೆಂಗಳೂರು:  ರಾಜ್ಯ ಮೀಸಲು ಪಡೆ ನೇಮಕಾತಿಗಾಗಿ ನಡೆದ ದೈಹಿಕ ಪರೀಕ್ಷೆಯ ವೇಳೆ ಅಸಲಿ ಅಭ್ಯರ್ಥಿಗಳ ಪರವಾಗಿ ಹಾಜರಾಗಿದ್ದ ಮೂವರು ನಕಲಿ ಅಭ್ಯರ್ಥಿಗಳನ್ನು ಪೊಲೀಸ್‌ ಹಿರಿಯ ಅಧಿಕಾರಿಗಳು ಬಂಧಿಸಿದ್ದಾರೆ.

“ಕೆಎಸ್‌ಆರ್‌ಪಿ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಸಲಿ ಅಭ್ಯರ್ಥಿಗಳ ಪರವಾಗಿ ಪರೀಕ್ಷೆಗೆ ನಕಲಿ ಅಭ್ಯರ್ಥಿಗಳು ಹಾಜರಾಗಿದ್ದರು. ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ವೇಳೆ ಮೂವರು ನಕಲಿ ಅಭ್ಯರ್ಥಿಗಳು ಸಿಕ್ಕಿ ಬಿದ್ದಿದ್ದಾರೆ. ಇವರೊಂದಿಗೆ ಮೂವರು ಅಸಲಿ ಅಭ್ಯರ್ಥಿಗಳನ್ನು ಕೂಡಾ ಬಂಧಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಅಭ್ಯರ್ಥಿ ಮಲ್ಲಯ್ಯ ಪೂಜಾರಿ ಎಂಬವರ ಪರವಾಗಿ ಸೈಯದ್‌‌ ಚಿಮ್ಮಡ್‌‌, ಪ್ರಕಾಶ್ ಆಡಿನ್ ಜಗದೀಶ್ ದೊಡ್ಡಗೌಡರ ಪರವಾಗಿ ಹಾಗೂ ನಾಗಪ್ಪ ಪರವಾಗಿ ಮಲ್ಲಿಕಾರ್ಜುನ್ ಎನ್ನುವವರು ಪರೀಕ್ಷೆಗೆ ಹಾಜರಾಗಿದ್ದರು. ಮಡಿವಾಳ ಹಾಗೂ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಇವರ ವಿರುದ್ದ ಪ್ರಕರಣ ದಾಖಲಾಗಿದೆ” ಎಂದು ಹೇಳಿದ್ದಾರೆ.

“ಐದು ಲಕ್ಷ ರೂ.ಗೆ ಮಾತುಕತೆ ನಡೆಸಿದ ನಕಲಿ ಅಭ್ಯರ್ಥಿಗಳು ಅಸಲಿ ಅಭ್ಯರ್ಥಿಗಳ ಪರವಾಗಿ ಕೆಎಸ್‌ಆರ್‌ಪಿ ನೇಮಕಾತಿ ಪರೀಕ್ಷೆ ಬರೆಯಲು ಒಪ್ಪಿಗೆ ನೀಡಿದ್ದರು ಎನ್ನುವ ಮಾಹಿತಿ ಇದೆ” ಎಂದಿದ್ದಾರೆ.

error: Content is protected !!