ಕೇರಳ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ಕೇರಳದ ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಮೇ 19 ಕ್ಕೆ ಕಣ್ಣೂರು ಮತ್ತು ಕಾಸರಗೋಡಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದೇಶದ ವಿವಿಧ ಹವಾಮಾನ ಮುನ್ಸೂಚನಾ ಕೇಂದ್ರಗಳು ಮೇ 18ರಂದು ರಾಜ್ಯದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕೇರಳ ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರವು ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.