ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವರ ವಿಶೇಷ ದರ್ಶನ ಮಾಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಕೊಲ್ಲೂರು ದೇವಸ್ಥಾನದ ಪರವಾಗಿ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತ ಮಾಡಿದರು. ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ದೇವಿಯ ವಿಶೇಷ ದರ್ಶನ ಮಾಡಿದ್ದಾರೆ. ವಿಶೇಷ ಪೂಜೆಯನ್ನು ಸಲ್ಲಿಕೆ ಮಾಡಿದ್ದಾರೆ. ನಂತರ ಕೊಲ್ಲೂರಿನ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳನ್ನು ಸಂದರ್ಶಿಸಿ ಮಹಾ ಪೂಜೆಯಲ್ಲಿ ಭಾಗಿಯಾಗಿದ್ದಾರೆ.