ನವದೆಹಲಿ : ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಕೊರೊನಾ ದೃಢಪಟ್ಟಿದೆ. ಭಾರತದ ಅನುಭವಿ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರಿಗೆ ಮಾಲ್ಡೀವ್ಸ್ ನಿಂದ ಭಾರತಕ್ಕೆ ಆಗಮಿಸಿದ ನಂತರ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಮಾಲ್ಡೀವ್ಸ್ನಿಂದ ಭಾರತಕ್ಕೆ ವಾಪಸ್ ಬಂದ ತಕ್ಷಣ ವಿರಾಟ್ ಕೊಹ್ಲಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ನಡೆಸಿದ್ದಾರೆ. ಸೋಂಕಿನಿಂದ ಕೊಹ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಇಂಗ್ಲೆಂಡ್ ಪ್ರವಾಸ ಆರಂಭಕ್ಕೂ ಮುನ್ನವೇ ಭಾರತ ತಂಡ ಸಮಸ್ಯೆಗಳ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿದೆ. ಅಶ್ವಿನ್ ಸೇರಿದಂತೆ ಕೆಲವು ಆಟಗಾರರಿಗೆ ಕೋವಿಡ್ -19 ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಬಂದಿವೆ ಎಂದು ಹೇಳಲಾಗುತ್ತಿದೆ.