ಮಧ್ಯಪ್ರದೇಶ: ಕ್ವಾರಂಟೈನ್ ನಲ್ಲಿರುವ ಕೋವಿಡ್ ರೋಗಿ ಮತ್ತು ಆತನ ಇಬ್ಬರು ಸ್ನೇಹಿತರ ಮೇಲೆ ಮನೆಯಲ್ಲಿ ಪಾರ್ಟಿ ಮಾಡಿದಕ್ಕೆ ಪ್ರಕರಣ ದಾಖಲಾಗಿದೆ.

ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ನಿವಾಸಿಯೊಬ್ಬ ಕೋವಿಡ್ ರೋಗಿಯಾಗಿದ್ದು, ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ಆತನನ್ನು ಮನೆಯಲ್ಲಿ ಐಸೋಲೇಟ್ ಆಗುವಂತೆ ಸೂಚಿಸಲಾಗಿತ್ತು. ಕೋವಿಡ್ ದೃಢಪಟ್ಟಿರುವ ಹಿನ್ನೆಲೆ, ಮನೆಯಲ್ಲಿ ಇದ್ದು ಆರೋಗ್ಯದ ಬಗ್ಗೆ ಕಾಳಜಿ ವಹಿಸೋದು ಬಿಟ್ಟು, ಆತ ಆರೋಗ್ಯವಾಗಿರುವ ತನ್ನ ಇಬ್ಬರು ಸ್ನೇಹಿತರನ್ನು ಮನೆಗೆ ಕರೆಸಿ ಎಣ್ಣೆ ಪಾರ್ಟಿ ಮಾಡಿದ್ದ. ಮೂವರ ಬೇಜವಾಬ್ದಾರಿತನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪುರುಷೋತ್ತಮ್, ಜನರು ಸೋಂಕು ನಿಯಂತ್ರಿಸಲು ನಮ್ಮೊಂದಿಗೆ ಕೈ ಜೋಡಿಸಬೇಕು. ಈ ರೀತಿ ನಿರ್ಲಕ್ಷ್ಯ ದೋರಣೆ ತೋರಿದರೆ ನಾವೇನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.