ಸಿಎಸ್ಕೆ ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿಯ ಐಪಿಎಲ್ ನನ್ನ ಕೊನೆಯ ಟೂರ್ನಿಯಾಗಿದ್ದು, ಈ ಮೂಲಕ ನಾನು ಐಪಿಎಲ್ಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ರಾಯುಡು ಟ್ವೀಟ್ ಮಾಡಿ ತಿಳಿಸಿದ್ದರು.
ಆದರೆ ನಿವೃತ್ತಿ ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡುವ ಮೂಲಕ ಅಂಬಾಟಿ ರಾಯುಡು ಅಚ್ಚರಿ ಮೂಡಿಸಿದ್ದಾರೆ. ಇತ್ತ ರಾಯುಡು ನಿವೃತ್ತಿ ಘೋಷಿಸಿರುವ ಸುದ್ದಿ ವೈರಲ್ ಆಗಿದೆ. ಇದರ ಬೆನ್ನಲ್ಲೆ ಸಿಎಸ್ಕೆ ಮ್ಯಾನೇಜ್ಮೆಂಟ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದ ಕಾರಣ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ ಎನ್ನಲಾಗ್ತಿದೆ.