ನವದೆಹಲಿ: ಟೆಕ್ ದೈತ್ಯ ಗೂಗಲ್ ನಲ್ಲಿ ಭಾರೀ ಪ್ರಮಾಣದ ಉದ್ಯೋಗಗಳನ್ನು ಕಡಿತಗೊಳಿಸಿರುವ ಬಗ್ಗೆ ಕೇಳಿಬರುತ್ತಿರುವ ವ್ಯಾಪಕ ಟೀಕೆಗೆ ಕಂಪನಿಯ ಸಿಇಒ ಸುಂದರ್ ಪಿಚೈ ಪ್ರತಿಕ್ರಿಯಿಸಿದ್ದಾರೆ.
12 ಸಾವಿರ ಜನರನ್ನು ಕಂಪನಿಯಿಂದ ವಜಾಗೊಳಿಸಿರುವುದನ್ನು ಸುಂದರ್ ಪಿಚೈ ಸಮರ್ಥಿಸಿಕೊಂಡಿದ್ದಾರೆ. ‘ಕಂಪೆನಿಯ ಪ್ರಗತಿ ನಿಧಾನವಾಗಿದ್ದ ಕಾರಣ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು. ಇಂತಹ ವಿಚಾರದಲ್ಲಿ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ’ ಎಂದು ಅವರು ಹೇಳಿದ್ದಾರೆ.