ಚಾಮರಾಜನಗರದ ಕೋವಿಡ್ ಆಸ್ಪತ್ರೆ ದುರಂತ: ಸರಕಾರವೇ ಹೊಣೆ: ಸಿ.ಟಿ.ರವಿ.! - BC Suddi
ಚಾಮರಾಜನಗರದ ಕೋವಿಡ್ ಆಸ್ಪತ್ರೆ ದುರಂತ: ಸರಕಾರವೇ ಹೊಣೆ: ಸಿ.ಟಿ.ರವಿ.!

ಚಾಮರಾಜನಗರದ ಕೋವಿಡ್ ಆಸ್ಪತ್ರೆ ದುರಂತ: ಸರಕಾರವೇ ಹೊಣೆ: ಸಿ.ಟಿ.ರವಿ.!

ಬೆಂಗಳೂರು: ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿರುವುದು ಕ್ಷಮೆಗೆ ಅರ್ಹವಲ್ಲದ ಘಟನೆ. ಆಕ್ಸಿಜನ್ ಸಮಸ್ಯೆಯಿಂದ ಈ ಘಟನೆಯಾಗಿದ್ದರೆ ಸರ್ಕಾರವೇ ಹೊಣೆ ಹೊರಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಮಾಧ್ಯಮದವರ ಮುಂದೆ  ಮಾತನಾಡಿದ ಅವರು,ಚಾಮರಾಜನಗರ ದುರಂತವನ್ನು, ಸಂಕಷ್ಟವನ್ನು ನೋಡಿದೆ. ಇದು ಘೋರ ಅನ್ಯಾಯ. ಇದಕ್ಕೆ ಯಾರೇ ಹೊಣೆಯಾಗಿದ್ದರು ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.

ಬೇರೆ ರಾಜ್ಯಗಳಲ್ಲಿ ಕೇಳಿ ಬರುತ್ತಿದ್ದ ಇಂತಹ ಘಟನೆ ನಮ್ಮ ರಾಜ್ಯದಲ್ಲೇ ನಡೆದಿರುವುದು ದುರಂತ. ಯಾರೇ ತಪ್ಪಿತಸ್ಥರಿದ್ರೂ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಸಿಎಂಗೆ ಮನವಿ ಮಾಡಿದ್ದೇನೆ. ನನಗೆ ಘಟನೆ ಬಗ್ಗೆ ತಿಳಿದ ತಕ್ಷಣ ಸಿಎಂ ಭೇಟಿ ಮಾಡಿ ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದೇನೆ. ಇಂತಹ ಘಟನೆ ಮರುಕಳಿಸದಂತೆ ಎಲ್ಲಾ ಜಿಲ್ಲೆಯಲ್ಲೂ ಎಚ್ಚರ ವಹಿಸುವಂತೆ ಒತ್ತಾಯಿಸುತ್ತೇನೆ. ಬೇರೆ ಬೇರೆ ರಾಜ್ಯಗಳಘಟನೆ ನಮಗೆ ಪಾಠ ಆಗಬೇಕಿತ್ತು, ಆದರೆ ಆಗಿಲ್ಲ ಎಂದರು.