ಚಿತ್ರದುರ್ಗ ಉಪವಿಭಾಗಾಧಿಕಾರಿ ಪ್ರಸನ್ನ ಮೃತ.! - BC Suddi
ಚಿತ್ರದುರ್ಗ ಉಪವಿಭಾಗಾಧಿಕಾರಿ ಪ್ರಸನ್ನ ಮೃತ.!

ಚಿತ್ರದುರ್ಗ ಉಪವಿಭಾಗಾಧಿಕಾರಿ ಪ್ರಸನ್ನ ಮೃತ.!

 

ಚಿತ್ರದುರ್ಗ: ಚಿತ್ರದುರ್ಗ ಉಪವಿಭಾಗಾಧಿಕಾರಿ ಪ್ರಸನ್ನ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಾಕಿಂಗ್ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.ಪ್ರಸನ್ನ (51) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಚಿತ್ರದುರ್ಗ ನಗರದ ಗೋನೂರು ರಸ್ತೆಯಲ್ಲಿ ವಾಕಿಂಗ್ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ತಲೆಗೆ ಗಂಭೀರವಾದ ಗಾಯವಾಗಿತ್ತು.

ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ಪ್ರಸನ್ನರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.