ನವದೆಹಲಿ: ಭಾರತಕ್ಕೆ ಡಿಸೆಂಬರ್​ 4ರಂದು ಜವಾದ್​ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದಾಗ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಜವಾದ್ ಪ್ರಭಾವದಿಂದ ಡಿಸೆಂಬರ್ 4 ಮತ್ತು 5ರಂದು ಆಂಧ್ರ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ. ಅದರಲ್ಲೂ ಮೊದಲು ಒಡಿಶಾದ ಕರಾವಳಿ ತೀರ ತಲುಪಲಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ, ಚಂಡಮಾರುತದ ಪ್ರಭಾವ ಹೆಚ್ಚಾಗಿ ಆಗಲಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಮಾಡಿದ್ದು, ಅಲ್ಲಿನ ಜನರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಹಾಗೇ ರಕ್ಷಣಾ ಕಾರ್ಯಾಚರಣೆ ಆಗಮಿಸುವಂತೆ ಎನ್​ಡಿಆರ್​ಎಫ್​, ಒಡಿಆರ್​ಎಎಫ್​ಗಳನ್ನೂ ವಿನಂತಿಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟಾರೆ ವಿಷಯಗಳ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ.