ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ಹಾಕಬೇಕು: ಸಿದ್ದರಾಮಯ್ಯ - BC Suddi
ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ಹಾಕಬೇಕು: ಸಿದ್ದರಾಮಯ್ಯ

ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ಹಾಕಬೇಕು: ಸಿದ್ದರಾಮಯ್ಯ

ಬೆಂಗಳೂರು: ಸೆಕ್ಸ್ ಸಿ.ಡಿ ವಿಚಾರದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಬೇಕು ಮತ್ತು ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಕ್ಸ್ ಸಿಡಿ ವಿಚಾರದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಬೇಕು. ಈಗಾಗಲೇ ಸಂತ್ರಸ್ಥ ಯುವತಿ ವಿಡಿಯೋ ಮಾಡಿ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದ್ದು, ತನಗೆ ಭದ್ರತೆ ಬೇಕು ಎಂದು ಹೇಳಿದ್ದಾಳೆ. ಹೀಗಾಗಿ ಈ ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲೇ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

error: Content is protected !!