ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಅಂತಿಮ ಕಣದಲ್ಲಿ 9 ಅಭ್ಯರ್ಥಿಗಳು - BC Suddi
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಅಂತಿಮ ಕಣದಲ್ಲಿ 9 ಅಭ್ಯರ್ಥಿಗಳು

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಅಂತಿಮ ಕಣದಲ್ಲಿ 9 ಅಭ್ಯರ್ಥಿಗಳು

 

ಚಿತ್ರದುರ್ಗ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಉಮೇದುವಾರಿಕೆ ಹಿಂತೆಗೆದುಕೊಂಡ ನಂತರ ಅಂತಿಮವಾಗಿ 9 ಅಭ್ಯರ್ಥಿಗಳು ಸ್ಪರ್ಧೆಯಲಿದ್ದಾರೆ. 

ನ.ಕೆಂಚವೀರಪ್ಪ, ಜೆ.ತಿಪ್ಪೇಸ್ವಾಮಿ ಕೊರ್ಲಕುಂಟೆ, ರಾ.ಸು.ತಿಮ್ಮಯ್ಯ ಗೌಡಿಹಳ್ಳಿ, ದೊಡ್ಡಮಲ್ಲಯ್ಯ, ಮಾಲತೇಶ್ ಅರಸ್ ಹರ್ತಿಕೋಟೆ, ಡಿ.ಓ.ಮುರಾರ್ಜಿ, ಕೆ.ಎಂ.ಶಿವಸ್ವಾಮಿ ನಾಯಕನಹಟ್ಟಿ, ಆರ್.ಶೇಷಣ್ಣಕುಮಾರ್ ಹಾಗೂ ಚಿಕ್ಕಪ್ಪನಹಳ್ಳಿ ಷಣ್ಮುಖ ಅವರು ಅಂತಿಮವಾಗಿ ಸ್ಪರ್ಧೆಯಲ್ಲಿದ್ದಾರೆ.

ಗಣೇಶಯ್ಯ ಕೆ.ಪಿ.ಎಂ, ನಿರಂಜನ ದೇವರಮನೆ, ಆರ್.ಮಲ್ಲಿಕಾರ್ಜುನಯ್ಯ, ಸಿ.ಆರ್.ಮೂರ್ತಿ ಅವರು ಉಮೇದುವಾರಿಕೆ ಹಿಂತೆಗೆದುಕೊಂಡಿದ್ದಾರೆ. ಮತದಾನವು ಮೇ 9 ರಂದು ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣಾಧಿಕಾರಿ ಹಾಗೂ ಚಿತ್ರದುರ್ಗ ತಾಲ್ಲೂಕು ತಹಶೀಲ್ದಾರ್ ವೆಂಕಟೇಶಯ್ಯ ತಿಳಿಸಿದ್ದಾರೆ.