ಲಖನೌ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದು ಎದುರು ಬರುತ್ತಿದ್ದ ಟ್ರಕ್​ಗೆ ಆಂಬ್ಯುಲೆನ್ಸ್ ಗುದ್ದಿದ ಪರಿಣಾಮ ಆಂಬ್ಯುಲೆನ್ಸ್​ನಲ್ಲಿದ್ದ 7 ಮಂದಿ ಮೃತಪಟ್ಟಿದ್ದು, ಇದರಲ್ಲಿ 6 ಮಂದಿ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಇಂದು ಮುಂಜಾನೆ ತಮ್ಮ ಊರು ಪಿಲ್ಭಿಟ್​ಗೆ ಆಂಬ್ಯುಲೆನ್ಸ್​ನಲ್ಲಿ ಹಿಂದಿರುಗುವಾಗ​ ದೆಹಲಿ-ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.

ಇನ್ನು ಚಾಲಕನ ನಿಯಂತ್ರಣ ಕಳೆದುಕೊಂಡ ಆಯಂಬುಲೆನ್ಸ್​, ಮೊದಲು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಎದುರು ಬರುತ್ತಿದ್ದ ಟ್ರಕ್​​ಗೆ ಗುದ್ದಿದೆ. ಪರಿಣಾಮ ಚಾಲಕ ಹಾಗೂ ಒಂದೇ ಕುಟುಂಬದ 6 ಮಂದಿ ಸೇರಿದಂತೆ ಏಳು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.