ಬೆಂಗಳೂರು: ಡಿ.21ರಂದು ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21ರಂದು ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಂಸದೀಯ
ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.