ತ್ರಿಪುರಾ: ತ್ರಿಪುರಾ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿಪ್ಲಬ್ ದೇಬ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಹೈಕಮಾಂಡ್‌ ನಿರ್ಧಾರದಂತೆ ಬಿಪ್ಲಬ್ ದೇವ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಅವರ ಸ್ಥಾನಕ್ಕೆ ಹೊಸ ಮುಖ್ಯಮಂತ್ರಿ ನೇಮಕಗೊಳ್ಳಲಿದ್ದು, ಈ ಹಿಂದೆ ಸಿಎಂ ಬಿಪ್ಲಬ್ ದೇವ್ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

2023 ರಲ್ಲಿ ತ್ರಿಪುರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ರಣತಂತ್ರ ರೂಪಿಸಿ ನಾಯಕತ್ವ ಬದಲಾವಣೆ ಮಾಡಿದೆ ಎನ್ನಲಾಗಿದೆ.