ನವದೆಹಲಿ:  ಪಶ್ಚಿಮ ದೆಹಲಿ ಮುಂಡ್ಕಾ ಮೆಟ್ರೋ ನಿಲ್ದಾಣದ ಸನಿಹದಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡ ಸಂಭವಿಸಿ 27 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಕಿ ಹೊತ್ತಿಕೊಂಡ ಕಟ್ಟಡದ ಮಾಲೀಕರಾದ ಹರೀಶ್ ಗೋಯೆಲ್ ಮತ್ತು ಅವರ ಸಹೋದರ ವರುಣ್ ಗೋಯೆಲ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತರ ವಿರುದ್ಧ ಭಾರತೀಯರ ಸೆಕ್ಷನ್ 304 (ಕೊಲೆಗೆ ಸಮನಾಗದ ಅಪರಾಧಿ ನರಹತ್ಯೆಗೆ ಶಿಕ್ಷೆ), 308 (ಅಪರಾಧೀಯ ನರಹತ್ಯೆ ಮಾಡುವ ಪ್ರಯತ್ನ), 120 (ಜೈಲು ಶಿಕ್ಷೆಯೊಂದಿಗೆ ಶಿಕ್ಷಾರ್ಹ ಅಪರಾಧ ಮಾಡಲು ವಿನ್ಯಾಸವನ್ನು ಮರೆಮಾಚುವುದು) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನು ಎಸಿಯಲ್ಲಿ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಅಧಿಕಾರಿಗಳು ಹೇಳಿದ್ದಾರೆ.