ನವದೆಹಲಿ: ಕಳೆದ ಮೂರ್ನಾಲ್ಕು ದಿನಗಳಿಂದ ಕೋವಿಡ್ ದೃಢಪಟ್ಟ ದೈನಂದಿನ ಪ್ರಕರಣಗಳ ಸಂಖ್ಯೆಗಳಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಶನಿವಾರ 3.37 ಲಕ್ಷ, ಭಾನುವಾರ 3.33 ಲಕ್ಷ ಮತ್ತು ಸೋಮವಾರ 3.06 ಲಕ್ಷ ಪ್ರಕರಣಗಳು ದೃಢಪಟ್ಟಿದ್ದವು.

ಕೇಂದ್ರ ಆರೋಗ್ಯ ಇಲಾಖೆ ಇಂದು ನೀಡಿದ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ 2,55,874 ಜನರಿಗೆ ಸೋಂಕು ದೃಢಪಟ್ಟಿದ್ದು, 614 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,36,842 ಕ್ಕೆ ಏರಿದೆ. ಸೋಂಕು ದೃಢ ಪ್ರಮಾಣ ಶೇಕಡ 15.52 ರಷ್ಟಿದೆ. 24 ಗಂಟೆಗಳಲ್ಲಿ 2,67,753 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.