ದ್ವಿತೀಯ ಪಿಯುಸಿ ಪರೀಕ್ಷೆ ಮುಂದಕ್ಕೆ.! ಪ್ರಥಮ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸ್.! - BC Suddi
ದ್ವಿತೀಯ ಪಿಯುಸಿ ಪರೀಕ್ಷೆ ಮುಂದಕ್ಕೆ.! ಪ್ರಥಮ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸ್.!

ದ್ವಿತೀಯ ಪಿಯುಸಿ ಪರೀಕ್ಷೆ ಮುಂದಕ್ಕೆ.! ಪ್ರಥಮ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸ್.!

ಬೆಂಗಳೂರು: ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ, ಹಾಗೂ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

.ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

,